LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಂಧ್ರಪ್ರದೇಶ: ಮದ್ಯ ಹಗರಣ ಪ್ರಕರಣ: ವೈಎಸ್ಆರ್‌ಸಿಪಿ ಸಂಸದ ಮಿಧುನ್ ರೆಡ್ಡಿ ಬಂಧನ..!

ಅಮರಾವತಿ : ಆಂಧ್ರಪ್ರದೇಶದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ 3,200 ಕೋಟಿ ಮದ್ಯ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ವೈಎಸ್‌ಆರ್‌ಸಿಪಿ ಸಂಸದ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.’

ಮಂಗಳಗಿರಿಯಲ್ಲಿರುವ ಸಿಐಡಿ ಕಚೇರಿಯಲ್ಲಿ ಸಂಸದರನ್ನು ಸುಮಾರು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಎಸ್‌ಐಟಿ ಅಧಿಕಾರಿಗಳು ಅವರ ಕುಟುಂಬದ ಸದಸ್ಯರಿಗೆ ಅವರ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು.

ರವಿವಾರ ವಿಜಯವಾಡದ ಸ್ಥಳೀಯ ನ್ಯಾಯಾಲಯದ ಮುಂದೆ ರೆಡ್ಡಿಯನ್ನು ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ. ಮದ್ಯ ಹಗರಣ ಪ್ರಕರಣದಲ್ಲಿ 4ನೇ ಆರೋಪಿ ಎಂದು ಮಿಧುನ್ ರೆಡ್ಡಿ ಅವರನ್ನು ಹೆಸರಿಸಲಾಗಿತ್ತು. ಶನಿವಾರ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಎಸ್‌ಐಟಿ ಸಮನ್ಸ್‌ ಜಾರಿ ಮಾಡಿತ್ತು. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದ ನಂತರ ಈ ಬೆಳವಣಿಗೆ ನಡೆದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026