E-PAPER
17 Nov 2026, 05:20:15 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯುವ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ-19: ದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಕಾಂಗ್ರೆಸ್ ಕಾರ್ಯಕರ್ತರು ‘ನಿರುದ್ಯೋಗ ದಿನ’ವಾಗಿ ಆಚರಿಸಿ, ಪಕೋಡಾ.. ತರಕಾರಿ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಪಾಟೀಲ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವಂತೆ ಆಗ್ರಹಿಸಲಾಯಿತು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಿ, ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವೇಳೆ ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಪಾಟೀಲ ಅವರು ಮಾತನಾಡಿ, “ಬಿಜೆಪಿ ಆಡಳಿತದಲ್ಲಿ ಯುವಕರಿಗೆ ಎಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ? ಯುವಕರು ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬೇಕು?” ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರ ಶೀಘ್ರ ಉದ್ಯೋಗ ನೇಮಕಾತಿಗೆ ಮುಂದಾಗಬೇಕು. ಯುವಕರು ಪಕೋಡಾ.. ತರಕಾರಿ ಮಾರಾಟ ಮಾಡಿಕೊಂಡು ಜೀವನ ಕಟ್ಟಿಕೊಳ್ಳಬೇಕೇ? ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಐಟಿ, ಐಟಿಇಎಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಗೆ ವಿಶೇಷ ನೀತಿಗಳನ್ನು ರೂಪಿಸಬೇಕು. ರಾಷ್ಟ್ರೀಯ ಉದ್ಯೋಗ ನೀತಿಯನ್ನು ಜಾರಿಗೊಳಿಸುವ ಮೂಲಕ ನಿರುದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಯುವಕರ ಭವಿಷ್ಯಕ್ಕೆ ಆದ್ಯತೆ ನೀಡಿ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಆದಾಯ ತೆರಿಗೆ ಇಲಾಖೆಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾರ್ತಿಕ ಬಿ. ಪಾಟೀಲ ಆರೋಪಿಸಿದರು. ಸಚಿವ ಸತೀಶ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ದೂರಿದರು.

ಪ್ರತಿಭಟನೆಯಲ್ಲಿ ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಪಾಟೀಲ, ಯುವ ಕಾಂಗ್ರೆಸ್ ಕಾರ್ಯದರ್ಶಿ ಉದಯ ಗೌಡರ, ಮಾಜಿ ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯಲ್ಲಪ್ಪ ಶಿಂಗೆ, ಸದಾಕತ ಮಕಾನದಾರ, ಆಸ್ತಾಪ್ ಕಮತನೂರ, ಶಿವು ಪಾಟೀಲ, ವಿಷ್ಣು ಕಾರಬಾರಿ, ರಾಯಪ್ಪ ಬಾಗತನವರ, ಪ್ರವೀಣ ತುಕ್ಕಾನಟ್ಟಿ, ದಾದಾಪೀರ ಜಮಾದಾರ, ಸಲೀಂ ಮಕಾನದಾರ, ಪ್ರಕಾಶ ಹಟ್ಟಿಹೊಳಿ, ವಿನಾಯತ್ ಕಲಾದಗಿ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ